ದುಬಾಯಿ ಗಡಿನಾಡ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸುವ ಕಾರ್ಯವೆಂದು ಮುಖ್ಯಮಂತ್ರಿ ಬೊಮ್ಮಾಯಿ ಶ್ಲಾಘನೆ

0 0
Read Time:1 Minute, 44 Second

ದುಬಾಯಿ ಗಡಿನಾಡ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸುವ ಕಾರ್ಯವೆಂದು ಮುಖ್ಯಮಂತ್ರಿ ಬೊಮ್ಮಾಯಿ ಶ್ಲಾಘನೆ

ಕಾಸರಗೋಡು: ಯು.ಎ.ಇ ಯಲ್ಲಿ ನೆಲೆಸಿರುವ ಕಾಸರಗೋಡಿನ ಕನ್ನಡ ಭಾಷಿಕರನ್ನು ಒಟ್ಟು ಸೇರಿಸಿ ಅವರ ಸಾಹಿತ್ಯ – ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೈಗೊಂಡಿರುವ ದುಬಾಯಿ ಗಡಿನಾಡ ಉತ್ಸವವು ಐತಿಹಾಸಿಕ ಯಶಸ್ಸು ಕಾಣಲೆಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಸಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಯು.ಎ.ಇ ಘಟಕ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಈ ತಿಂಗಳ 20 ರಂದು ದುಬಾಯಿಯಲ್ಲಿ ಜರಗಲಿರುವ ಐತಿಹಾಸಿಕವಾದ ದುಬಾಯಿ ಗಡಿನಾಡ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಸಂಘಟಕರನ್ನು ಅಭಿನಂದಿಸಿ ಮಾತನಾಡಿದರು. ದುಬಾಯಿಯಲ್ಲಿ ಇಂಥಾ ಕಾರ್ಯಕ್ರಮಗಳು ಸಾಕಷ್ಟು ನಡೆಯಬೇಕು, ಆ ಮೂಲಕ ಕನ್ನಡದ ಮನಸ್ಸುಗಳನ್ನು ಒಗ್ಗೂಡಿಸುವ ಕೆಲಸ ಸಾಕಾರವಾಗಲಿ ಎಂದರು.

ಈ ಸಂದರ್ಭದಲ್ಲಿ ದುಬಾಯಿ ಗಡಿನಾಡ ಉತ್ಸವ ಸಮಿತಿ ಪದಾಧಿಕಾರಿಗಳಾದ ಝೆಡ್. ಎ. ಕಯ್ಯಾರ್, ಎ.ಆರ್. ಸುಬ್ಬಯ್ಯಕಟ್ಟೆ, ಕರ್ನಾಟಕ ಜಾನಪದ ಪರಿಷತ್ತು ದ.ಕ ಜಿಲ್ಲಾಧ್ಯಕ್ಷ ಪಮ್ಮಿ ಕೊಡಿಯಾಲ್ ಬೈಲ್, ಸಮಾಜ ಸೇವಕ ಅರಿಬೈಲು ಗೋಪಾಲ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Leave a Reply

Your email address will not be published. Required fields are marked *

error: Content is protected !!