ಮೂರನೇ ಅಂತಸ್ತಿನಿಂದ ಜಿಗಿದು ಮುಕ್ಕ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಮೂರನೇ ಅಂತಸ್ತಿನಿಂದ ಜಿಗಿದು ಮುಕ್ಕ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

0 0
Read Time:1 Minute, 18 Second

ಮೂರನೇ ಅಂತಸ್ತಿನಿಂದ ಜಿಗಿದು ಮುಕ್ಕ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಸುರತ್ಕಲ್: ಮುಕ್ಕ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ವಾಸವಿದ್ದ 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಭಾಷಿತ ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಘಟ‌ನೆಯಿಂದ‌ ವಿದ್ಯಾರ್ಥಿನಿಯ ತಲೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಕೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅವರು ಅಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ.‌

ವಿದ್ಯಾರ್ಥಿನಿ ಹುಬ್ಬಳ್ಳಿ ಮೂಲದವರೆಂದು ತಿಳಿದು ಬಂದಿದ್ದು, ಈಕೆ ಮುಕ್ಕದ ಶ್ರೀನಿವಾಸ್ ಕಾಲೇಜಿನಲ್ಲಿ ಎಂಬಿಬಿಎಸ್ ಅಭ್ಯಾಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಯುವತಿ ತನ್ನ ಹೆತ್ತವರೊಂದಿಗೆ ಸುಭಾಷಿತ ನಗರದ “ಸುಭಾಷಿತ ಪ್ರೈಡ್” ಎಂಬ ವಸತಿ ಸಮುಚ್ಚಯದಲ್ಲಿ 2ನೇ ಅಂತಸ್ತಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು ಎನ್ನಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Leave a Reply

Your email address will not be published. Required fields are marked *

error: Content is protected !!